ಮಂಗಳೂರು : ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ನಲ್ಲಿ ಒಂದು ಉಪಮುಖ್ಯಮಂತ್ರಿ ಹುದ್ದೆಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂಬ ಕೂಗು ಜೋರಾಗಿದೆ.
ಮುಸ್ಲಿಂ ಸಮುದಾಯಕ್ಕೆ ಡಿಸಿಎಂ ಹುದ್ದೆ ಕೊಡುವುದಾದರೆ ಯುಟಿ ಖಾದರ್ ಗೆ ಕೊಡಿ ಎಂದು ಅವರ ಬೆಂಬಲಿಗರು ಪಟ್ಟು ಹಿಡಿದಿದ್ದು, ಯುಟಿ ಖಾದರ್ ಗೆ ಡಿಸಿಎಂ ಹುದ್ದೆ ಸಿಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ ಎಂದು ಮೂಲಗಳು ತಿಳಿಸಿದೆ.
ಸಚಿವ ಸಂಪುಟದಲ್ಲಿ 4 ಡಿಸಿಎಂ ಹುದ್ದೆಗಳನ್ನು ಸೃಷ್ಟಿ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ಸದ್ಯ ಸಿಎಂ ಆಯ್ಕೆ ಕಸರತ್ತು ನಡೆಯುತ್ತಿದ್ದು, ಇಂದು ಸಂಜೆಯೊಳಗೆ ಈ ಬಗ್ಗೆ ಅಧಿಕೃತ ಘೋಷಣೆ ಸಾಧ್ಯತೆ ಇದೆ. ಬಳಿಕ ಡಿಸಿಎಂ ಹುದ್ದೆ ಸೃಷ್ಟಿ , ಸಚಿವ ಸಂಪುಟ ರಚನೆಯಾಗಲಿದೆ ಎನ್ನಲಾಗಿದೆ.