ಚಿಕ್ಕಮಗಳೂರು : ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಪ್ರಜ್ವಲ್ ರೇವಣ್ಣ ( Prajwal Revanna) ಮಾತನಾಡಿದ್ದಾರೆ.
ಕಡೂರಿನ ಯಗಟಿಯಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ಸಿಗರು ಕಾಂಗ್ರೆಸ್ ಅಲೆಯಲ್ಲಿ ಗೆದ್ದಿಲ್ಲ, ಬಿಜೆಪಿ ಮಾಡಿದ ತಪ್ಪಿನಿಂದ ಗೆದ್ದಿದ್ದಾರೆ.
ಜನರಿಗೆ ಹಲವು ಉಚಿತ ಗ್ಯಾರೆಂಟಿ ಘೋಷಣೆ ಮಾಡಿದ್ದಾರೆ, ಜನ ಕಾಯತ್ತಿದ್ದಾರೆ. ಕೊಟ್ಟ ಮಾತನ್ನು ಹೇಗೆ ಉಳಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ ಎಂದರು.
ಸರ್ಕಾರ ಬಂದು 48 ಗಂಟೆಯೂ ಆಗಿಲ್ಲ ಅಷ್ಟರಲ್ಲೇ ಕಾಂಗ್ರೆಸ್ ನವರು ಉಲ್ಟಾ ಹೊಡೆಯುತ್ತಿದ್ದಾರೆ. ಗ್ಯಾರೆಂಟಿಗಳಿಗೆ ಹಲವು ಷರತ್ತು ಇದೆ ಎಂದು ಹೇಳುತ್ತಿದ್ದಾರೆ ಎಂದರು.ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ನಾಯಕರು ಉಲ್ಟಾ ಹೊಡೆದಿದ್ದಾರೆ ಎಂದರು.