ಮಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ್ ರೈ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ನಂತರ ಮಾತನಾಡಿದ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ.
ಸೋತರೂ ಪಕ್ಷದ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಇರುತ್ತೇನೆ. ಮುಂದೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ ಎಂದರು.
ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೆ ಹಿನ್ನಡೆ ಆಗಿದೆ. ಬಿಜೆಪಿ ಸ್ಪಷ್ಟ ಬಹುಮತದಿಂದ ಯಾವತ್ತೂ ಸರ್ಕಾರ ರಚಿಸಲಿಲ್ಲ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಸೋತರೂ ಪಕ್ಷದ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಇರುತ್ತೇನೆ ಎಂದರು.