ಬೆಂಗಳೂರು: ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆಯಾಗಲಿದ್ದಾರೆ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರು ಇಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಅವರು ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಚುನಾವಣಾ ದೃಷ್ಟಿಯಿಂದ ಹೈಕಮಾಂಡ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿರಲಿಲ್ಲ. ಅವರನ್ನೇ ಮುಂದುವರೆಸಿತ್ತು. ಈಗ ಹೊಸಬರ ಆಯ್ಕೆ ನಡೆಯಲಿದೆ ಅಂಥ ಅವರು ತಿಳಿಸಿದರು.
ಇನ್ನೂ ಇದೇ ವೇಳೆ, ಅವರು ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆ ಕೆಲವೊಮ್ಮೆ ನಡೆಯುತ್ತದೆ. ನಾವು ಸೋಲನ್ನ ಸವಾಲಾಗಿ ತೆಗೆದುಕೊಂಡಿದ್ದೇವೆ ಅಂಥ ತಿಳಿಸಿದರು. ಇನ್ನೂ ಮೈಸೂರು ಹಾಗೂ ಬೆಂಗಳೂರು ಸೇರಿದಂತೆ ಮೂರು ಭಾಗದಲ್ಲಿ ಮೇಳ ನಡೆಯುತ್ತಿದೆ. ದೇಶಾದ್ಯಂತ ಒಟ್ಟು 45 ಸ್ಥಳದಲ್ಲಿ ರೋಜ್ ಗಾರ್ ಮೇಳ ನಡೆಯುತ್ತಿದ್ದು, ಬೆಂಗಳೂರಿನ ಸೆಂಟ್ರಲ್ ಕಾಲೇಜು ಕ್ಯಾಂಪಸ್ನಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಂಸದ ಪಿ.ಸಿ ಮೋಹನ್ ಉಪಸ್ಥಿತರಿದ್ದರು.