ನವದೆಹಲಿ: ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಹೇಳಿದ್ದಾರೆ. ಬಡವರು, ಮಹಿಳೆಯರು, ಯುವಜನತೆ ಮತ್ತು ರೈತರು ನಮ್ಮ ಸರ್ಕಾರದ 4 ಜಾತಿಗಳು. ಈ ನಾಲ್ಕು ಜಾತಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.ಕೋವಿಡ್ ಸವಾಲುಗಳ ನಡುವೆಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನವು ಮುಂದುವರೆದಿದೆ ಮತ್ತು ನಾವು 3 ಕೋಟಿ ಮನೆಗಳ ಗುರಿಯನ್ನು ಸಾಧಿಸುವ ಸಮೀಪದಲ್ಲಿ ಇದ್ದೇವೆ. ಕುಟುಂಬಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದ ಉಂಟಾಗುವ ಅವಶ್ಯಕತೆಗಳನ್ನು ಪೂರೈಸಲು ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು.
ಪ್ರಧಾನಮಂತ್ರಿ ಮುದ್ರಾ ಯೋಜನೆಯ ಅಡಿ 43 ಕೋಟಿ ರೂ.ಗಳ ಸಾಲವನ್ನು ಮಂಜೂರು ಮಾಡಿದೆ. ಸ್ಟಾರ್ಟ್ಅಪ್ ಇಂಡಿಯಾ ಮತ್ತು ಸ್ಟಾರ್ಟ್ಅಪ್ ಕ್ರೆಡಿಟ್ ಗ್ಯಾರಂಟಿ ಯೋಜನೆಗಳು ನಮ್ಮ ಯುವಕರಿಗೆ ಸಹಾಯ ಮಾಡುತ್ತಿವೆ ಎಂದು ತಿಳಿಸಿದರು.