ಥಾಣೆ:- ಸಂತ ಗಡ್ಗೆ ಮಹಾರಾಜ್ ಪ್ರಾಥಮಿಕ ಮತ್ತು ಮಾಧ್ಯಮಿಕ ಆಶ್ರಮ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜರುಗಿದೆ. ಈ ಶಾಲೆಯಲ್ಲಿ 1 ರಿಂದ 10 ನೇ ತರಗತಿಯ 200 ವಿದ್ಯಾರ್ಥಿಗಳು ಇದ್ದಾರೆ. ನಾಲ್ವರು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲರನ್ನೂ ಚಿಕಿತ್ಸೆ ನಂತರ ಶಹಾಪುರದ ಉಪವಿಭಾಗದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಶಹಾಪುರ ತಹಸೀಲ್ದಾರ್ ಕೋಮಲ್ ಠಾಕೂರ್ ಪಿಟಿಐಗೆ ತಿಳಿಸಿದ್ದಾರೆ.
ಮಧ್ಯಾಹ್ನದ ಊಟಕ್ಕಾಗಿ ವಿದ್ಯಾರ್ಥಿಗಳಿಗೆ ಆಹಾರ ಮತ್ತು ಸಿಹಿ ಖಾದ್ಯವನ್ನು ನೀಡಲಾಗಿತ್ತು, 109 ಜನರಲ್ಲಿ 63 ಹುಡುಗಿಯರು ಮತ್ತು 46 ಹುಡುಗರು ವಾಂತಿ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರು ಹೇಳಿದರು.ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸ್ಥಿತಿಗತಿ ವಿಚಾರಿಸಿದರು. ಪೀಡಿತ ವಿದ್ಯಾರ್ಥಿಗಳ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಸಹ ವೈದ್ಯಕೀಯ ಸೌಲಭ್ಯದ ಹೊರಗೆ ಜಮಾಯಿಸಿದರು, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರನ್ನು ನಿಯೋಜಿಸಲಾಗಿದೆ. ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಠಾಕೂರ್ ಹೇಳಿದರು