ಶಿವಮೊಗ್ಗದಲ್ಲಿ ಮಂಗನ ಕಾಯಿಲೆ: 11 ಮಂದಿಗೆ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮಂಗನ ಖಾಯಿಲೆ ಸೋಂಕು ಪ್ರಕರಣ ಹೆಚ್ಚಾಗಿದ್ದು, ಇಂದು ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ, ನಿನ್ನೆ ಶಿವಮೊಗ್ಗ ಜಿಲ್ಲೆ ಹಾಗೂ ಶಿರಸಿಯ 19 ಜನರ ರಕ್ತದ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ 11 ಮಂದಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೂವರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಹೊಸನಗರ ತಾಲೂಕಿನ ಎಂಟು ಮಂದಿಯಲ್ಲಿ ಮಂಗನ ಕಾಯಿಲ್ ಪಾಸಿಟಿವ್ ಕಾಣಿಸಿಕೊಂಡಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ಆದರೆ, ಶಿರಸಿಯಲ್ಲಿ ಯಾರಿಗೂ ಮಂಗನ ಕಾಯಿಲೆ ವಕ್ಕರಿಸಿಲ್ಲ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.

 

Loading

Leave a Reply

Your email address will not be published. Required fields are marked *