ಶಾಖಾಹಾರಿ’ ಪ್ರೀ-ರಿಲೀಸ್ ಇವೆಂಟ್…,ಮಲೆನಾಡಿನ ಥ್ರಿಲ್ಲರ್ ಕಥೆಗೆ ಅಶ್ವಿನಿ-ಸುಕ್ಕ ಸೂರಿ ಸಾಥ್

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದರಲ್ಲಿ ಒಬ್ಬರು ರಂಗಾಯಣ ರಘು. ಅವರ ಅಮೋಘ ಅಭಿನಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ವಿಶೇಷ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವ ರಂಗಾಯಣ ರಘು ಅವರೀಗ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಲಾಗಿದೆ. ಸಂದೀಪ್ ಸುಂಕದ್ ಚೊಚ್ಚಲ ಹೆಜ್ಜೆ ಶಾಖಾಹಾರಿ.. ಈ ಸಿನಿಮಾದಲ್ಲಿ ರಂಗಾಯಣ ರಘು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸನ್ನದ್ಧರಾಗಿದ್ದಾರೆ. ಇದೇ ತಿಂಗಳ 16ರಂದು ಮಲೆನಾಡ ಸೊಗಡಿನ ಥ್ರಿಲ್ಲಿಂಗ್ ಕಥಾಹಂದರ ಶಾಖಾಹಾರಿ ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವೆಂಬಂತೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು. ಇದೇ ವೇಳೆ ರಂಗಾಯಣ ರಘು ಅವರಿಗೆ ಶಾಖಾಹಾರಿ ಸಿನಿ ಬಳಗ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಿತು. ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ಅವರ ಕಲಾಸೇವೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ದುನಿಯಾ ಸೂರಿ ಮಾತನಾಡಿ, ನಾನು ಈ ರೀತಿ ಮೈಕ್ ಹಿಡಿದು ಮಾತನಾಡುತ್ತಿದ್ದೇನೆ. ನನ್ನ ನಿರ್ದೇಶಕ ಅಂತಾ ಕರೆಯುತ್ತಾರೆ ಎಂದರೆ. ಈ ಹಿಂದೆ ನಾವು ಯೋಗರಾಜ್ ಮಣಿ ಅಂತಾ ಸಿನಿಮಾ ಮಾಡಬೇಕಾದರೆ ರಘು ಸರ್ ಸಿಕ್ತಾರೆ. ನಮಗೆ ಅಲ್ಲಿಂದ ದೊಡ್ಮನೆ ಹುಡುಗ ಸಿನಿಮಾದವರೆಗೂ ಜೊತೆಯಲಿ ಇದ್ದರು. ಈ ನಡುವೆ ಅಣ್ಣ ಮಾಡುವ ಪಾತ್ರ ಇಲ್ಲ ಎಂದು ಬಿಟ್ಟುಕೊಡುತ್ತೇವೆ. ನಾನು ಒಂದು ವಿಷಯ ತೆಗೆದುಕೊಂಡು ಹೋದರೆ ಅದಕ್ಕೊಂದು ಹಿನ್ನೆಲೆ ಹೇಳಿ ಗಟ್ಟಿ ಮಾಡುತ್ತಾರೆ. ಯೋಗರಾಜ್, ಸರ್ ನಮಗೆ ಗುರು. ಅನುಭವ ಹೇಳ್ತಾರೆ, ಹೆದರಬೇಡ ಅಂತಾರೇ. ನಾನು ಆಕ್ಷನ್ ಕಟ್ ಹೇಳಬಹುದು. ನಾನು ಇಂದು ಏನಾದ್ರೂ ಮಾಡಿದ್ದೇನೆ ಎಂದರೆ ಅದರಲ್ಲಿ ರಘು ಸರ್ ದ್ದೂ ದೊಡ್ಡ ಪಾಲು. ನಮ್ಮ ಬರವಣಿಗೆಯನ್ನು ಸ್ಕ್ರೀನ್ ಗೆ ತರುವುದು ಇದೆಯಲ್ಲ. ಅದಕ್ಕೆ ಕಲಾವಿದ ಜೀವ ತುಂಬಬೇಕು. ನನಗೆ ಅನಿಸುತ್ತದೆ ನಾವು ರಘು ಸರ್ ಅವರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲವೇನೋ? ಅನಿಸುತ್ತೆ ಎಂದರು.

ರಂಗಾಯಣ ರಘು ಮಾತನಾಡಿ, ನನ್ನ ಒಟ್ಟು ಜೀವನದಲ್ಲಿ ನನಗೆ ತುಂಬಾ ಅಮೂಲ್ಯ ನೆನಪು ಕೊಟ್ಟಂತಹವರು ಸೂರಿ ಅವರು ಹಾಗೂ ಅಶ್ವಿನಿ ಮೇಡಂ. ನಾನು ಇಂಡಸ್ಟ್ರೀ್ಗೆ ಬಂದು ಸುಮಾರು 35 ವರ್ಷವಾಯ್ತು. ನಾನು ಒಂದ ಸಿನಿಮಾಗೋಸ್ಕರ ಬಂದವನು. 94 ರಿಂದ 2001ರವೆಗೆ ನಾನು ಮಾಡಿದ ಸಿನಿಮಾಗಳ ಬಗ್ಗೆ ಊರಲೆಲ್ಲಾ ಹಾಗೇ ಮಾಡಿದ್ದೇನೆ. ಹೀಗೆ ಮಾಡಿದ್ದೇನೆ ಹೇಳಿಕೊಂಡು ಬರುತ್ತಿದ್ದೆ. ರಂಗಾಯಣದ ಬಗ್ಗೆ ನಾನು ಎಷ್ಟು ನೆನಪು ಮಾಡಿಕೊಂಡರೇ ಸಾಲದು. ನನ್ನದು 350 ಸಿನಿಮಾವಾಗಿದೆ. ಈ ರೀತಿ ಪಾತ್ರ ಮಾಡಬೇಕು ಎಂದು ನಾನು ಯೋಚಿಸಿಲ್ಲ ಅಪ್ಪು ಸರ್ ಋಣ ಜಾಸ್ತಿ ಇದೆ, ಮೇಡಂ ಬಂದಿರುವುದು ಅಷ್ಟೇ ಖುಷಿಯಾಗುತ್ತಿದೆ. ನಮಗೆ ದೊಡ್ಮನೆಯಿಂದ ದೊಡ್ಡ ಆಶೀರ್ವಾದ ಸಿಕ್ಕಿದೆ. ಇಡೀ ಇಂಡಸ್ಟ್ರೀಯ ಎಲ್ಲಾ ನಟರ ಜೊತೆ ಮಾಡಿದ್ದೇನೆ. ಹೊಸಬರ ಜೊತೆಯೂ ಮಾಡಿದ್ದೇನೆ. ಹೊಸಬರು ಮತ್ತಷ್ಟು ಬರಲಿ ಎಂದರು.

Loading

Leave a Reply

Your email address will not be published. Required fields are marked *