ಬೆಂಗಳೂರು: ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಅಗಿದ್ದ ನಟೋರಿಯಸ್ ರೌಡಿ ಶೀಟರ್ʼರನ್ನು ಜಯನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ದಾಮ್ ಅಫ್ಜಲ್ ಅರೆಸ್ಟ್ ಆದ ರೌಡಿ ಶೀಟರ್ ಆಗಿದ್ದು, ಕೊಲೆ ಯತ್ನ, ರಾಬರಿ , ಕಳ್ಳತನ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದ. 2023 ಅಕ್ಟೋಬರ್ ನಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಎ1 ಆರೋಪಿಯಾಗಿ ಅರೆಸ್ಟ್ ಆಗಿ ಜೈಲಿ ಸೇರಿದ್ದ. ನಂತರ ಜಾಮೀನಿನ ಮೇಲೆ ಹೊರಗೆ ಬಂದು ಪೊಲೀಸರ ಸಂಪರ್ಕಕ್ಕೂ ಸಿಗದೆ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಸದ್ದಾಮ್ ಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಸಹ ಜಾರಿಯಾಗಿತ್ತು. ಕಳೆದ 1 ತಿಂಗಳ ಹಿಂದೆ ಸದ್ದಾಮ್ ನನ್ನು ಅರೆಸ್ಟ್ ಮಾಡಲು ತೆರಳಿದ್ದ ಪೊಲೀಸರ ಮೇಲೆ ಮಲ ಎಸೆದು ಎಸ್ಕೇಪ್ ಆಗಿದ್ದ. ಹೀಗಾಗಿ ಪೊಲೀಸರಿಗೂ ಈತ ದೊಡ್ಡ ತಲೆನೋವಾಗಿದ್ದ. ಸದ್ಯ ಜಯನಗರ ಪೊಲೀಸರು ಈತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.