ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಕರ್ನಾಟಕ 3 ನೇ ಸ್ಥಾನದಲ್ಲಿದೆ: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗುಪ್ತಚರ ದಳ ಹಾಗೂ ಪೊಲೀಸ್ ಇಲಾಖೆಯಿಂದ ಕಾನೂನು ಕಾಪಾಡುವ ಕೆಲಸ ನಡೆಯುತ್ತಿಲ್ಲ. ಸರ್ಕಾರ ಈ ಬಗ್ಗೆ ಎಚ್ಚರ ವಹಿಸಬೇಕಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಡಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಇರುವಲ್ಲಿ ಹೂಡಿಕೆ ಹರಿದುಬರುತ್ತದೆ,

ಅಭಿವೃದ್ಧಿ ಸಾಧ್ಯವಾಗುತ್ತದೆ. ಆದರೆ ಉದ್ಯೋಗ ಮತ್ತು ಹೂಡಿಕೆಯ ತಾಣವಾಗಿರುವ ಕರ್ನಾಟಕ ಈಗ ಅಪರಾಧದ ನಾಡಾಗಿ ಕುಖ್ಯಾತಿ ಪಡೆಯುತ್ತಿದೆ. NCRB ವರದಿಯ ಪ್ರಕಾರ, ಕಳೆದ ವರ್ಷ 1,80,742 ಪ್ರಕರಣ ದಾಖಲಾಗಿದೆ. ಇದು ಬಿಜೆಪಿ ಅವಧಿಗಿಂತ ಶೇ.46 ಕ್ಕೂ ಅಧಿಕ. ಹಿರಿಯ ನಾಗರಿಕರ ವಿರುದ್ಧ ನಡೆದ ಅಪರಾಧಿ ಚಟುವಟಿಕೆ 50 ಸಾವಿರದಷ್ಟು ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಕರ್ನಾಟಕ 3 ನೇ ಸ್ಥಾನದಲ್ಲಿದೆ. ಬೆಂಗಳೂರು ಈಗ ಅಪರಾಧಗಳ ರಾಜಧಾನಿ, ಸೈಬರ್ ಅಪಾರಾಧಗಳ ಕೇಂದ್ರ ಎಂಬ ಕುಖ್ಯಾತಿಗೆ ಒಳಗಾಗಿದೆ. ಒಂದೇ ವರ್ಷದಲ್ಲಿ 432 ಕೋಟಿ ರೂ.ನಷ್ಟು ಸೈಬರ್ ವಂಚನೆ ನಡೆದಿದೆ. ಬಿಜೆಪಿ ಅವಧಿಯ 2020-21 ರಲ್ಲಿ 6,422 ಸೈಬರ್ ಅಪರಾಧ ಪ್ರಕರಣ ದಾಖಲಾಗಿತ್ತು. 2023 ರಲ್ಲಿ 17,623 ಪ್ರಕರಣ ದಾಖಲಾಗಿದೆ. ಬೆಂಗಳೂರು ಈಗ ಸೇಫ್ ಸಿಟಿ ಬದಲು ಕ್ರೈ ಸಿಟಿ ಎಂಬ ಹೆಸರು ಪಡೆದಿದೆ. ಕೆಎಫ್ ಡಿ ಮೊದಲಾದ ಸಂಘಟನೆಗಳ ಮೇಲಿದ್ದ ಪ್ರಕರಣ ಹಿಂಪಡೆದಿರುವುದರಿಂದ ದುಷ್ಕರ್ಮಿಗಳು ರಾಜಾರೋಷವಾಗಿ ಓಡಾಡುತ್ತಿದ್ದಾರೆ ಎಂದರು.

Loading

Leave a Reply

Your email address will not be published. Required fields are marked *