ಬೆಂಗಳೂರು: ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಕರ್ನಾಟಕದ ನಾಲ್ಕು ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದಿಂದ ಮೂರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಬ್ಬರಿಗೆ ಮತ್ತೆ ಅವಕಾಶ ನೀಡಿದೆ. ಇನ್ನೊಂದು ಸ್ಥಾನಕ್ಕೆ ಹೊಸ ಮುಖಕ್ಕೆ ಮಣೆ ಹಾಕಿದೆ.
ಜಿ.ಸಿ.ಚಂದ್ರಶೇಖರ್ ಮತ್ತು ನಾಸೀರ್ ಹುಸೇನ್ ಅವರಿಗೆ ಕಾಂಗ್ರೆಸ್ ಮತ್ತೊಮ್ಮೆ ಟಿಕೆಟ್ ನೀಡಿದೆ. ಇನ್ನು ಎಐಸಿಸಿ ಖಜಾಂಚಿ ಅಜಯ್ ಮಕೇನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಲಾಗಿದೆ. ಇನ್ನು ತೆಲಂಗಾಣದಲ್ಲಿ ರೇಣುಕಾ ಚೌಧರಿ, ಅನಿಲ್‌ಕುಮಾರ್ ಯಾದವ್‌ಗೆ ಟಿಕೆಟ್ ಸಿಕ್ಕರೆ, ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್‌ಗೆ ಟಿಕೆಟ್ ಘೋಷಿಸಲಾಗಿದೆ.