‘ಆಹ್ಲಾನ್ ಮೋದಿ’ ಕಾರ್ಯಕ್ರಮ: ದಕ್ಷಿಣ ಭಾರತದ 4 ಭಾಷೆಗಳಲ್ಲಿ ಮಾತನಾಡಿದ ಮೋದಿ

ಬುಧಾಬಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಫೆ.13ರಂದು ಅಬುಧಾಬಿಯಲ್ಲಿ ನಡೆದ ‘ಆಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಮಾತನಾಡಿ ಗಮನ ಸೆಳೆದಿದ್ದಾರೆ.

ಕನ್ನಡ, ತಮಿಳು, ತೆಲುಗು, ಮತ್ತು ಮಲಯಾಳಂನಲ್ಲಿ ಮಾತನಾಡುವ ಮೂಲಕ ಮೋದಿ ಜನರ ಹೃದಯ ಗೆದ್ದಿದ್ದಾರೆ.

ಈ ನಾಲ್ಕು ಭಾಷೆಯ ಜನರು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಯುಎಇಯ ವಿವಿಧ ಪ್ರದೇಶಗಳು ಮತ್ತು ಭಾರತದ ವಿವಿಧ ರಾಜ್ಯಗಳ ಜನರು ಸ್ಥಳದಲ್ಲಿ ಜಮಾಯಿಸಿದ್ದು,”ಎಲ್ಲರ ಹೃದಯಗಳು ಸಂಪರ್ಕ ಹೊಂದಿವೆ” ಎಂದು ಪ್ರಧಾನಿ ಮೋದಿ ಹೇಳಿದರು.

ಜಾಯೆದ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಬುಧಾಬಿಯಲ್ಲಿ, ನೀವು ಹೊಸ ಇತಿಹಾಸವನ್ನು ಸೃಷ್ಟಿಸಿದ್ದೀರಿ. ಯುಎಇಯ ಎಲ್ಲಾ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದಿದ್ದೀರಿ. ಆದರೆ ಪ್ರತಿಯೊಬ್ಬರ ಹೃದಯವು ಸಂಪರ್ಕ ಹೊಂದಿದೆ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಬಡಿತ, ಪ್ರತಿ ಉಸಿರು, ಪ್ರತಿ ಧ್ವನಿ ಹೇಳುತ್ತದೆ – ಭಾರತ-ಯುಎಇ ಸ್ನೇಹ ಚಿರಾಯುವಾಗಲಿ ಎಂದು ಆಶಿಸಿದರು.

Loading

Leave a Reply

Your email address will not be published. Required fields are marked *