ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ನಲ್ಲಿ ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಕೆಹಟ್ಟಿ ನಿವಾಸಿ ನಯನಾ ಎಂ.ಜಿ (27) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕುಳಿತಿದ್ದ ಸೀಟ್‌ನಲ್ಲಿ ಬ್ಯಾಗ್ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.