ಬೆಂಗಳೂರು: ಕೆಲವೇ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ಕಾವೇರಿ ನಿವಾಸಕ್ಕೆ ಸಚಿವರು, ಶಾಸಕರು ಆಗಮಿಸುತ್ತಿದ್ದಾರೆ. ಹೊಸ ಸಂಪ್ರದಾಯಕ್ಕೆ ಸಿಎಂ ಸಿದ್ದರಾಮಯ್ಯ ನಾಂದಿ ಹಾಡಿದ್ದಾರೆ. ಹೌದು ಸೂಟ್ಕೇಸ್ ಬದಲು ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿ ತಂದಿದ್ದಾರೆ. ಇನ್ನೂ ಕಾವೇರಿ ನಿವಾಸದಲ್ಲಿ ಅಧಿಕಾರಿಗಳು ಅವರಿಗೆ ಬಜೆಟ್ ಪ್ರತಿ ಹಸ್ತಾಂತರಿಸಿದರು. ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ಗೆ ಅನುಮೋದನೆ ಪಡೆದರು.