ಮಂಡ್ಯ: ಮಹಿಳೆ ಹಾಗೂ ಪುರುಷ ಇಬ್ಬರೂ ತಬ್ಬಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದ ಹಿರೋಡೆ ಕೆರೆ ದಡದ ಬಳಿ ನಡೆದಿದೆ. ಮೃತರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತರ ವಯಸ್ಸು 40 ರಿಂದ 45 ವರ್ಷ ಎಂದು ಅಂದಾಜಿಸಲಾಗಿದೆ. ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಅನುಮಾನಸ್ಪದ ಸ್ಥಿತಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿದೆ. ಕೆರೆಯ ದಡದ ಕೆಸರಿನಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ಮೂಡಿಸಿವೆ. ಮೂರು ದಿನಗಳ ಹಿಂದೆಯೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಬೆಳಿಗ್ಗೆ ಕೆರೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪಾಂಡವಪುರ ಪಟ್ಟಣ ಠಾಣಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪಾಂಡವಪುರ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.