ಬೆಂಗಳೂರು: ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ಕರೆಂಟ್ ನೀಡಲಾಗುವುದು. ಎಲ್ಲಾ ಸರ್ಕಾರಿ ಶಾಲೆ,
ಕಾಲೇಜುಗಳಲ್ಲಿ ನಿರಂತರ ನೀರಿನ ಸೌಲಭ್ಯ, ಫ್ರೀ ಕರೆಂಟ್ಗೆ 25 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು ಇಡಲಾಗುವುದು. ರಾಜ್ಯದ 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.