80 ವರ್ಷ ಮೇಲ್ಪಟ್ಟ ಹಿರಿಯರಿಗಾಗಿ ಅನ್ನ ಸುವಿಧಾ ಯೋಜನೆಯನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಈ ಯೋಜನೆ ಮೂಲಕ ಅಂಥ ವೃದ್ಧರ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತದೆ. ಇಷ್ಟೇ ಅಲ್ಲದೆ, 10 ಜಿಲ್ಲೆಗಳಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು. ತಾತ್ಕಾಲಿಕ ವಸತಿ ಸಮುಚ್ಚಯಕ್ಕಾಗಿ 100 ಕೋಟಿ ರೂ. ಅನುದಾನ ನೀಡಲಾಗುವುದು. ಕೊಳಗೇರಿ ನಿವಾಸಿಗಳಿಗೆ ಶೀಘ್ರದಲ್ಲೇ 48,796 ಮನೆಗಳ ಹಸ್ತಾಂತರ ಮಾಡಲಾಗುವುದು. ಕಾರ್ಮಿಕರಿಗೆ ESI ಯೋಜನೆಯಡಿ ಸೂಪರ್ಸ್ಪೆಷಾಲಿಟಿ ಸೇವೆಗೆ 313 ಕೋಟಿ ರೂ. ಅನುದಾನ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.