Petrol-Diesel price Today: ಇಂದು ಒಂದು ಲೀಟರ್ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ?

ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ ಬಳಕೆಯ ಎಲ್ಲಾ ವಸ್ತುಗಳ ಮೇಲೆ ಕ್ರಮೇಣ ಇದರ ಪರಿಣಾಮ ಬೀರುತ್ತದೆ. ಸರಕುಗಳ ಸಾಗಣೆಗೆ ಪೆಟ್ರೋಲ್ ಡಿಸೇಲ್‌ ಅಗತ್ಯವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹೀಗಾಗಿ ಪ್ರತಿದಿನ ಎಲ್ಲರೂ ಪೆಟ್ರೋಲ್ ಡಿಸೇಲ್‌ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್‌ ಬಿದ್ದಿದೆ.

ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌ (Petrol rate), ಡೀಸೆಲ್‌ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.

ದೆಹಲಿಯಲ್ಲಿ ಪೆಟ್ರೋಲ್ 96.72 ರೂ., ಡೀಸೆಲ್ 89.62 ರೂ. ಮುಂಬೈನಲ್ಲಿ ಪೆಟ್ರೋಲ್ 106.31 ರೂ., ಡೀಸೆಲ್ 94.24 ರೂ.,ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ., ಡೀಸೆಲ್ 92.76 ರೂ. ಚೆನ್ನೈನಲ್ಲಿ ಪೆಟ್ರೋಲ್​ 102.74ರೂ., ಡೀಸೆಲ್ 94.66 ರೂ., ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ. ಇದೆ. ಛತ್ತೀಸ್‌ಗಢದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 0.60 ಪೈಸೆಗಳಷ್ಟು ದುಬಾರಿಯಾಗಿದೆ.

ಇದಲ್ಲದೇ ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆಯಾಗಿದೆ. ಅದೇ ಸಮಯದಲ್ಲಿ, ಅಸ್ಸಾಂ, ಆಂಧ್ರಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.

ನೋಯ್ಡಾದಲ್ಲಿ ಪೆಟ್ರೋಲ್ 97.00 ರೂ ಮತ್ತು ಡೀಸೆಲ್ ಲೀಟರ್‌ಗೆ 89.86 ರೂ ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.42 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.47 ರೂ ಮತ್ತು ಡೀಸೆಲ್ 89.77 ರೂ. ಆಗಿದೆ. – ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ ರೂ 94.04 ಆಗಿದೆ.

Loading

Leave a Reply

Your email address will not be published. Required fields are marked *