ಬೆಂಗಳೂರು: ಖಾಸಗಿಯವರ ಜಮೀನು ಸ್ವಾಧೀನಪಡಿಸಿಕೊಳ್ಳುವಂತೆ ನ್ಯಾಯಾಲಯವು ಭೂ ಸ್ವಾಧೀನ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲಾಗದು ಎಂಬುದಾಗಿ ಕರ್ನಾಟಕ ಹೈಕೋರ್ಟ್ ಸ್ಪಷ್ಟ ಪಡಿಸಿದೆ.
ಈ ಸಂಬಂಧ ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಐವರು ರೈತರು ಸಲ್ಲಿಸಿದ್ದಂತ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಆರ್ ದೇವದಾಸ್ ಮತ್ತು ಕೆ ರಾಜೇಶ್ ರೈ ಅವರನ್ನೊಳಗೊಂಡ ವಿಭಾಗೀಯ ಪೀಠವು ನಡೆಸಿತು.
ವಾದ-ಪ್ರತಿವಾದವನ್ನು ಆಲಿಸಿದಂತ ನ್ಯಾಯಪೀಠವು, ಜಮೀನು ಸ್ವಾಧೀನ ಪಡಿಸಿಕೊಳ್ಳುವಂತೆ ನ್ಯಾಯಾಲಯಗಳು ನಿರ್ದೇಶ ನೀಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶ ಮಾಡಿದೆ. ಅಲ್ಲದೇ ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಹಾಗೂ ಕಾರ್ಯಕಾರಿ ಎಂಜಿನಿಯರ್ ಗೆ ಹೈಕೋರ್ಟ್ ಏಕ ಸದಸ್ಯ ಪೀಠ ನಿರ್ದೇಶಿಸಿದೆ. ಆದರೇ ಅವರು ಭೂ ಸ್ವಾಧೀನ ಪ್ರಾಧಿಕಾರದ ಅಧಿಕಾರಿಗಳಲ್ಲ ಎಂದು ತಿಳಿಸಿದೆ.