ಬ್ಯಾಕ್‌ ಟು ಬ್ಯಾಕ್‌ ಶತಕ ಸಿಡಿಸುವ ಜೊತೆಗೆ ವಿಶೇಷ ಸಾಧನೆಗೈದ ಯಶಸ್ವಿ ಜೈಸ್ವಾಲ್

ರಾಜ್‌ಕೋಟ್‌: ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಬ್ಯಾಕ್‌ ಟು ಬ್ಯಾಕ್‌ ಶತಕ ಸಿಡಿಸುವ ಜೊತೆಗೆ ಮತ್ತೊಂದು ವಿಶೇಷ ಸಾಧನೆ ಮಾಡಿದ್ದಾರೆ.

ರಾಜ್‌ಕೋಟ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಪಂದ್ಯದಲ್ಲಿ 2ನೇ ಬಾರಿಗೆ ಅಂತಾರಾಷ್ಟ್ರೀಯ ಟೆಸ್ಟ್‌ ದ್ವಿಶತಕ ಸಿಡಿಸಿದ ಜೈಸ್ವಾಲ್‌ ಇನ್ನಿಂಗ್ಸ್‌ವೊಂದರಲ್ಲಿ ಅತಿಹೆಚ್ಚು ಸಿಕ್ಸರ್‌ ಸಿಡಿಸಿದ ವಿಶ್ವದ 2ನೇ ಆಟಗಾರ ಹಾಗೂ ಟೀಂ ಇಂಡಿಯಾದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ

ಒಂದೇ ಇನ್ನಿಂಗ್ಸ್‌ನಲ್ಲಿ ಒಟ್ಟು 12 ಸಿಕ್ಸರ್‌ ಸಿಡಿಸುವ ಮೂಲಕ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ಅವರ ದಾಖಲೆಯನ್ನೂ ಸರಿಗಟ್ಟಿದ್ದಾರೆ. 1996ರಲ್ಲಿ ಜಿಂಬಾಬ್ವೆ ವಿರುದ್ಧ ಪಾಕ್‌ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ 12 ಸಿಕ್ಸರ್‌ ಸಿಡಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಅಲ್ಲದೇ ಈ ಹಿಂದೆ ಮಯಾಂಕ್ ಅಗರ್ವಾಲ್ ಮತ್ತು ನವಜೋತ್ ಸಿಂಗ್ ಸಿಧು ಅವರ ಹೆಸರಲ್ಲಿದ್ದ 8 ಸಿಕ್ಸರ್‌ಗಳ ಜಂಟಿ ದಾಖಲೆಯನ್ನೂ ನುಚ್ಚುನೂರು ಮಾಡಿದ್ದಾರೆ.

ರಣಜಿ ಟ್ರೋಫಿ, ದುಲೀಪ್‌ ಟ್ರೋಫಿ, ಇರಾನಿ ಕಪ್‌ ಟೂರ್ನಿಗಳಲ್ಲಿ ದ್ವಿಶತಕ ಸಿಡಿಸಿದ್ದ 22 ವರ್ಷ ವಯಸ್ಸಿನ ಯಶಸ್ವಿ ಜೈಸ್ವಾಲ್‌ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬ್ಯಾಕ್‌ ಟು ಬ್ಯಾಕ್‌ ದ್ವಿಶತಕಗಳ ಖಾತೆ ತೆರೆದಿದ್ದಾರೆ. ಅಲ್ಲದೇ ವಿನೋದ್‌ ಕಾಂಬ್ಳಿ, ವಿರಾಟ್‌ ಕೊಹ್ಲಿ ನಂತರ ಬ್ಯಾಕ್‌ ಟು ಬ್ಯಾಕ್‌ ದ್ವಿಶತಕ ಸಿಡಿಸಿದ 3ನೇ ಭಾರತೀಯ ಮತ್ತು ಇಂಗ್ಲೆಂಡ್‌ ವಿರುದ್ಧ ದ್ವಿಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಖ್ಯಾತಿಯನ್ನೂ ಹೆಗಲಿಗೇರಿಸಿಕೊಂಡಿದ್ದಾರೆ.

Loading

Leave a Reply

Your email address will not be published. Required fields are marked *