ನವದೆಹಲಿ : ದೆಹಲಿಯಲ್ಲಿ ನಡೆದಂತ ಕರ್ನಾಟಕ ಮುಂದಿನ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಮೇ.20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ,ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ . ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ ಎಂದು ಹೇಳಿದರು.
ದೆಹಲಿಯಲ್ಲಿ ನಡೆದಂತ ಕರ್ನಾಟಕ ಮುಂದಿನ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಮೇ.20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.ಈ ವಿಷಯ ತಿಳಿದಂತ ಡಿಕೆ ಶಿವಕುಮಾರ್ ಬೆಂಬಲಿಗರು, ಅಭಿಮಾನಿಗಳು, ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷರ ನಿವಾಸದ ಮುಂದೆ ಶುಭಾಶಯ ಕೋರಿ ಬೃಹತ್ ಗಾತ್ರದ ಬ್ಯಾನರ್ ಗಳನ್ನು ಅಳವಡಿಸಿದ್ದಾರೆ.
ಅಂದಹಾಗೇ ಇಂದು ಸಂಜೆ 7ಕ್ಕೆ ಮಹತ್ವದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಮೇ.20ರಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಕೂಡ ನಡೆಯಲಿದೆ ಎಂದು ಹೇಳಲಾಗುತ್ತಿದೆ.