ಬೆಂಗಳೂರು : ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳ ಹಿಂದೆ ಉತ್ತಮ ಮಳೆಯಾಗಿದೆ. ಆದರೆ ಕೃಷಿ ಚಟುವಟಿಕೆಗೆ ಬೇಕಾಗುವಷ್ಟು ಮಳೆಯಾಗಿಲ್ಲ ಎಂದು ರೈತರು ಮಾತನಾಡಿಕೊಳ್ಳುತ್ತಿದ್ದಾರೆ. ಇದೀಗ ಮುಂಗಾರು ಮಳೆ ಯಾವಾಗ ಎಂದು ರೈತರು ಎದುರು ನೋಡುತ್ತಿದ್ದಾರೆ.
ಮೂಲಗಳ ಪ್ರಕಾರ ಭಾರತಕ್ಕೆ ಕೇರಳದ ಮುಖಾಂತರ ಜೂನ್ 4 ರಂದು ಮಳೆ ಪ್ರವೇಶಿಸಲಿದೆ. ಜೂನ್ 2 ನೇ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಮಳೆಯ ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಕಡೆ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಜೂನ್ 4ರಂದು ಮುಂಗಾರು ಮಾರುತಗಳು ಕೇರಳವನ್ನು ಪ್ರವೇಶ ಮಾಡಲಿದೆ ಎಂದು ಹೇಳಿದೆ.ಮಾನ್ಸೂನ್ ಜೂನ್ 1 ರಂದು ದೇಶವನ್ನು ಪ್ರವೇಶಿಸುವುದಿಲ್ಲ. ಈ ಬಾರಿ ಸ್ವಲ್ಪ ತಡವಾಗಿ ಅಂದ್ರೆ ಜೂನ್ 4 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ.