ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಅನುಷ್ಕಾ ಶರ್ಮಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಮಾನಿಗಳ ಜೊತೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಫೆ.15 ರಂದು ವಿರುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಮಂಗಳವಾರ (ಫೆ.20) ಹಂಚಿಕೊಂಡಿದ್ದಾರೆ.
ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಅವರ ಮನೆಗೆ ಮತ್ತೊಬ್ಬ ಅತಿಥಿಯ ಆಗಮನವಾಗಿದೆ. ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಈಗಾಗಲೇ ‘ಅಕಾಯ್’ ಎಂದು ಹೆಸರಿಟ್ಟಿದ್ದಾರೆ. ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.