ಗೌಡತಿಯರ ಸೇನೆಯಿಂದ ದರ್ಶನ್ ವಿರುದ್ದ ದೂರು

ಬೆಂಗಳೂರು: ಹೆಣ್ಣಿನ ಬಗ್ಗೆ ಅವಹೇಳನಕಾರಿಯಾಗಿ ದರ್ಶನ್ ಮಾತನಾಡಿದ್ದಾರೆ. ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎಂದು ದರ್ಶನ್ ಮಾತನಾಡಿದ್ದಾರೆ. ದರ್ಶನ್ ಹೇಳಿಕೆಗೆ ಒಕ್ಕಲಿಗ ಗೌಡತಿಯರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಆದ್ದರಿಂದ ಮಹಿಳಾ ಆಯೋಗಕ್ಕೆ ದರ್ಶನ್ ವಿರುದ್ಧ ದೂರು ಸಲ್ಲಿಸಲಾಗಿದೆ.

ಜಯಶ್ರೀ , ರೇಣುಕಾ ನೇತೃತ್ವದಲ್ಲಿ ದರ್ಶನ್ ವಿರುದ್ಧ ಲಿಖಿತ ರೂಪದಲ್ಲಿ ದೂರು ನೀಡಿದ್ದು, ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎನ್ನುವ ಮಾತುಗಳನ್ನು ಮೊನ್ನೆ ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿಪರ್ವದಲ್ಲಿ ದರ್ಶನ್ ಹೇಳಿದ್ದರು. ಇದ್ದರಿಂ ರೊಚ್ಚಿಗೆದ್ದ ಒಕ್ಕಲಿಗ ಗೌಡತಿಯರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಇದು ಅವಮಾನ ಮಾಡುವಂಥದ್ದು ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

Loading

Leave a Reply

Your email address will not be published. Required fields are marked *