ಆನೇಕಲ್: ಪ್ರಿಯಕರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ..!

ಬೆಂಗಳೂರು:  ಯುವತಿಯೊಬ್ಬಳು ಪ್ರೀತಿಸಿದ ಯುವಕನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೊಟ್ಟಿಗೆರೆ ಗ್ರಾಮದ ಚಂದ್ರಕಲಾ (19) ಮೃತ ಯುವತಿ. ಪಿಯುಸಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಇದ್ದ ಚಂದ್ರಕಲಾ ಮತ್ತು ಪಕ್ಕದ ಮನೆಯ ಅರುಣ್‌ಕುಮಾ‌ರ್ ಪರಸ್ಪರ ಪ್ರೀತಿಸುತ್ತಿದ್ದರು.

ಪ್ರೀತಿ ವಿಷಯ ಹುಡುಗಿಯ ಮನೆಯವರಿಗೆ ಗೊತ್ತಾಗಿ ಹುಡುಗಿಗೆ ಬುದ್ಧಿವಾದ ಹೇಳಿದ್ದರು. ಜೈಲಿಗೆ ಹೋಗಿ ಬಂದಿರುವ ಹುಡುಗನ ವ್ಯಕ್ತಿತ್ವ ಸರಿ ಇಲ್ಲ, ಮದುವೆಯಾಗಬೇಡ ಎಂದು ಹುಡುಗಿಯ ಮನವೊಲಿಸಿ ಕನಕಪುರದ ಕಡೆಯ ಪರಿಚಿತರ ಸಂಬಂಧದಲ್ಲಿ ಹುಡುಗನನ್ನು ನೋಡಿ ಇತ್ತೀಚೆಗಷ್ಟೇ ಚಂದ್ರಕಲಾಗೆ ನಿಶ್ಚಿತಾರ್ಥ ಮಾಡಲಾಗಿತ್ತು.

ನಿಶ್ಚಿತಾರ್ಥ ವಿಷಯ ತಿಳಿದಿದ್ದ ಪ್ರಿಯಕರ ಚಂದ್ರಕಲಾಗೆ ಮದುವೆಯಾದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ ಜಿಗಣೆ ಬಳಿಯ ನಂಜಾಪುರದ ನೆಂಟರ ಮನೆಗೆ ಹೋಗಿದ್ದಾಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಯುವತಿಯ ಮನೆಯವರು ಜಿಗಣಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ

 

Loading

Leave a Reply

Your email address will not be published. Required fields are marked *