ಚನ್ನಪಟ್ಟಣ : ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಚುನಾವಣಾ ಸೋಲಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ .
ಪಂಚರತ್ನ ಯೋಜನೆಗಳು ಜನರಿಗೆ ಇಷ್ಟ ಆಗಿಲ್ಲಅನಿಸುತ್ತೆ. ಕಾಂಗ್ರೆಸ್ ಗ್ಯಾರಂಟಿಗಳ ನಂಬಿ ಜನರು ಮತಹಾಕಿದ್ದಾರೆ ಎಂದರು.ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ. ದೇವೇಗೌಡರು ಎರಡು ಬಾರಿ ಸೋತ ಬಳಿಕವೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿತ್ತು. ಜನ ಮುಂದಿನ ದಿನಗಳಲ್ಲಿ ಮತ್ತೆ ಜೆಡಿಎಸ್ ಬೇಕು ಎಂದು ಬಯಸುತ್ತಾರೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು.