ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ರಾಜ್ಯಸಭೆ ಚುನಾವಣೆಯ ಹಿನ್ನಲೆಯಲ್ಲಿ ಸಹಜವಾಗಿ ಈ ಭೇಟಿ ಬೇರೆ ಬೇರೆ ಆಯಾಮದ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ರಾಜ್ಯ ಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಇದೆ. ಅಖಾಡದಲ್ಲಿ ಐದನೇ ಅಭ್ಯರ್ಥಿ ಕಣಕ್ಕಿಳಿದಿರುವುದು ಚುನಾವಣಾ ಕಣವನ್ನು ರಂಗೇರಿಸಿದೆ. ಈ ನಡುವೆ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ ಹಾಕಲು ಪ್ರಯತ್ನಗಳು ತೀವ್ರಗೊಂಡಿದೆ.
ಇನ್ನು ಭೇಟಿ ಕುರಿತಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು, ಐತಿಹಾಸಿಕ ಆನೆಗೊಂದಿ ಉತ್ಸವವನ್ನ ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಮಾರ್ಚ್ ತಿಂಗಳಲ್ಲಿ ವೈಭವದಿಂದ ಆಚರಿಸಲಾಗುತ್ತೆ. ಈ ಸಂಬಂಧ ಸಿಎಂ,ಡಿಸಿಎಂಗೆ ಆಹ್ವಾನ ನೀಡಲು ಹೋಗಿದ್ದೆ ಎಂದರು.