ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನಕ್ಕೆ ಸಿಬ್ಬಂದಿಯಿಂದ ಸಜ್ಜು

ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆ ಮತದಾನಕ್ಕೆ ವಿಧಾನಸೌಧದಲ್ಲಿ ಸಿಬ್ಬಂದಿ ಯಿಂದ ಸಜ್ಜುಗೊಂಡಿದೆ.ಈ ನಿಟ್ಟಿನಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ವಿಧಾನಸೌಧದಲ್ಲಿ ಇಂದು ನಾಲ್ಕು ಸ್ಥಾನಗಳಿಗೆ ಮತದಾನ ನಡೆಯಲಿದ್ದು ಮೈತ್ರಿ ಅಭ್ಯರ್ಥಿ ಕಣದಲ್ಲಿ ಇರುವುದರಿಂದ ಚುನಾವಣಾ ಕಣ ರಂಗೇರಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲಾಬಲ 135 ಇತ್ತು. ಇದೀಗ ರಾಜಾ ವೆಂಕಟಪ್ಪ ನಾಯಕ ಮೃತ ಪಟ್ಟ ಹಿನ್ನಲೆಯಲ್ಲಿ ಸದ್ಯ ಕಾಂಗ್ರೆಸ್ ಬಲ 134 ಆಗಿದೆ. ಇನ್ನು ಬಿಜೆಪಿ 66, ಜೆಡಿಎಸ್ 19 ಸ್ಥಾನಗಳನ್ನು ಹೊಂದಿದೆ. ಪಕ್ಷೇತರರರು ನಾಲ್ವರು ಇದ್ದಾರೆ‌.

ಈಗಾಗಲೇ ಪಕ್ಷೇತರ ನಾಲ್ವರೂ ಕಾಂಗ್ರೆಸ್ ಗೆ ಮತ ಹಾಕುವ ಸಾಧ್ಯತೆ ಇದೆ. ಅದರಲ್ಲೂ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅವರು ಬಹಿರಂಗವಾಗಿ ತಾವು ಯಾರ ಪರವಾಗಿ ನಿಲ್ಲಲಿದ್ದಾರೆ ಎಂದು ಸ್ಪಷ್ಟವಾಗಿ ತಿಳಿಸಿಲ್ಲ.

Loading

Leave a Reply

Your email address will not be published. Required fields are marked *