ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಪ್ರತಾಪ್ ಸಿಂಹ

ಬೆಂಗಳೂರು: ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ. ಹೌದು ಕಳೆದ ತಿಂಗಳು ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾ.ಪಂ. ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ.

ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಕೆ ಸುಧಾಕರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ, ತಾನು ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಸಿದ್ಧ ಎಂದು ಪ್ರದೀಪ್ ಈಶ್ವರ್ ಗುಡುಗಿದ್ದರು. ಸದ್ಯ ಈಗ ತಮ್ಮ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

Loading

Leave a Reply

Your email address will not be published. Required fields are marked *