ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೇ 28ರಂದು ನೂತನ ಸಂಸತ್ ಭವನವನ್ನ ಉದ್ಘಾಟಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರುವಾರ ತಿಳಿಸಿದ್ದಾರೆ.
ಇನ್ನು ಇದಕ್ಕೂ ಮುನ್ನ ಓಂ ಬಿರ್ಲಾ ಅವರು ಪ್ರಧಾನಿ ಮೋದಿಯವರನ್ನ ಭೇಟಿಯಾಗಿ ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲು ಆಹ್ವಾನಿಸಿದರು.
ಅದ್ರಂತೆ, ‘ಹೊಸ ಸಂಸತ್ ಕಟ್ಟಡದ ನಿರ್ಮಾಣವು ಈಗ ಪೂರ್ಣಗೊಂಡಿದೆ ಮತ್ತು ಹೊಸ ಕಟ್ಟಡವು ಸ್ವಾವಲಂಬಿ ಭಾರತದ ಸ್ಫೂರ್ತಿಯನ್ನು ಸಂಕೇತಿಸುತ್ತದೆ’ ಎಂದು ಲೋಕಸಭಾ ಸಚಿವಾಲಯ ತಿಳಿಸಿದೆ.