ದಾವಣಗೆರೆ : ಮತ್ತೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಲ್ಲಿ ತೊಡಗಿದ್ದು, ದಾವಣಗೆರೆಯಲ್ಲಿ ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಸ್ತು ಬರಹಗಾರ ಪರಮೇಶ್ವರ್ ಎಂಬುವವರು 13 ಸಾವಿರ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆದಿದ್ದು, ಪರಮೇಶ್ವರ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಮನೆ ಖರೀದಿಯ ಡೀಡ್ ನೊಂದಣಿ ಪತ್ರ ನೀಡಲು ಹರಿಹರದ ಮಂಜುನಾಥ್ ಬಳಿ 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಮಂಜುನಾಥ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅಂತೆಯೇ 13 ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ.