ಬೆಂಗಳೂರು : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ನಿನ್ನೆಯಷ್ಟೇ ಪ್ರಮಾಣವಚನ ಸ್ವೀಕರಿಸದ ಬೆನ್ನಲ್ಲೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಎಂ.ಬಿ.ಪಾಟೀಲ್. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ನಮ್ಮ ಬಳಿ ಹೇಳಿದ್ದಾರೆ. ಎಲ್ಲಾ ಇಲಾಖೆಗಳ ಹಗರಣಗಳ ಬಗ್ಗೆ ತನಿಖೆ ಮಾಡಿಸುತ್ತೇವೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಪಿಎಸ್ ಐ ಹಗರಣ, ನೀರಾವರಿ ಇಲಾಖೆ ಹಗರಣ, ಗುತ್ತಿಗೆದಾರರ ಪ್ರಕರಣ ಸೇರಿದಂತೆ ಎಲ್ಲಾ ಕೇಸ್ ಗಳ ತನಿಖೆ ಮಾಡಿಸುತ್ತೇವೆ. ಅಧಿಕಾರಿಗಳು, ಸಚಿವರೇ ಇರಲಿ ತನಿಖೆ ನಡೆಸಿ ಶಿಕ್ಷೆ ಕೊಡಿಸುತ್ತೇವೆ ಎಂದು ತಿಳಿಸಿದ್ದಾರೆ.