ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದ ತನಿಖೆ ಮಾಡುವ ವಿಚಾರದ ಕುರಿತಂತೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಆಗಿರುವುದು ಸತ್ಯ.
ಎಲ್ಲಾ ಇಲಾಖೆಗಳ ಬಗ್ಗೆ ತನಿಖೆ ಆಗಬೇಕಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಆಗಬೇಕು. ಸೂಕ್ತ ತನಿಖೆ ನಡೆಸಲು ತನಿಖಾ ಆಯೋಗ ರಚನೆ ಮಾಡಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಬಳಿ ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಚಿವರಾದ್ರೆ ಜನರ ಹೆಚ್ಚಿನ ಸೇವೆ ಮಾಡಲು ಅವಕಾಶ ಸಿಗುತ್ತದೆ.ಹೆಚ್ಚುವರಿಯಾಗಿ ಡಿಸಿಎಂ ಹುದ್ದೆ ಸೃಷ್ಟಿಯಾಗುವ ಅವಶ್ಯಕತೆ ಇಲ್ಲ. ಡಿಸಿಎಂ ಒಬ್ಬರೇ ಸಾಕು ಅನಿಸುತ್ತದೆ ಎಂದರು.