ಬೆಂಗಳೂರು: ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸುರಿದಂತ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಕೆ ಎಸ್ ಎನ್ ಡಿ ಎಂ ಸಿಯು, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ, ರಾಜ್ಯಾಧ್ಯಂತ ಮುಂದಿನ ಎರಡು ದಿನ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ರಾಯಚೂರು, ಯಾದಗಿರಿ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ.