ಬೆಂಗಳೂರು: ರಾಜ್ಯ ಸರ್ಕಾರದಿಂದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಆದ್ರೇ ಹೀಗೆ ನೇಮಕ ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಂತ ಹೈಕೋರ್ಟ್, ಆಡಳಿತಾಧಿಕಾರಿಯ ನೇಮಕವನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಇಂದು ಈ ಸಂಬಂಧದ ಡಾ.ಶಿವಮೂರ್ತಿ ಶಿವಶರಣರು ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.
ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಂತ ನ್ಯಾಯಪೀಠವು, ಸರ್ಕಾರದಿಂದ ನೇಮಿಸಿದ್ದಂತ ಆಡಳಿತಾಧಿಕಾರಿ ನೇಮಕವನ್ನು ರದ್ದುಗೊಳಿಸಿತು.