ಬೆಂಗಳೂರು : ಅಧಿಕಾರ ಹಂಚಿಕೆ ಇಲ್ಲ , ಸಿದ್ದರಾಮಯ್ಯ ಅವರು 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ( MB Patil ) ಹೇಳಿದ್ದಾರೆ.
ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.
ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ, ಲೋಕಸಭೆ ಚುನಾವಣೆ ಬಳಿಕ ಯಾವು ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಅಧಿಕಾರವಧಿಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಸೇರಿ ಎಲ್ಲಾ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದರು.