`ಎಟಿಎಂ ಸರ್ಕಾರ’ ರಚನೆಯಾಗಿದೆ : ಟ್ವಿಟರ್ ನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು : ದೆಹಲಿ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ ಎಟಿಎಂ ಸರ್ಕಾರ ರಚನೆಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಟ್ವಿಟರ್ ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಡಿ.ಕೆ.

ಶಿವಕುಮಾರ್ ಅವರು ಸಿಎಂ ಆಗುವುದು ಇಲ್ಲ, ಅವರನ್ನು ಆಗಲು ಸಿದ್ದರಾಮಯ್ಯನವರು ಬಿಡುವುದು ಇಲ್ಲ. ಎಂ.ಬಿ.ಪಾಟೀಲ್ರು ಈ ಹೇಳಿಕೆಯ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ನೇರವಾದ ಎಚ್ಚರಿಕೆಯನ್ನು ರವಾನಿಸಿದ್ದಾರಷ್ಟೇ ಎಂದು ಹೇಳಿದೆ.

ಅದೇನೆ ಇದ್ದರೂ ಬಹುಮತ ದೊರಕಿದ ನಂತರದ ಈವರೆಗಿನ ಎಲ್ಲ ಬೆಳವಣಿಗೆಗಳನ್ನು ಗಮನಿಸಿದಾಗ, ಈ ಸರಕಾರ ಸುಸ್ತಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ, ಗ್ಯಾರಂಟಿಯೂ ಇಲ್ಲ. ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ #ATMSarkara ರಚನೆಯಾಗಿರುವುದು ಮತ್ತು ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ ಎಂದು ವಾಗ್ದಾಳಿ ನಡೆಸಿದೆ.

Loading

Leave a Reply

Your email address will not be published. Required fields are marked *