ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಭಾನುವಾರ ಹಾಸನದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 9 ಸೆಂ.ಮೀ ಮಳೆಯಾಗಿರುವ ವರದಿಯಾಗಿದೆ. ಶಿವಮೊಗ್ಗದ ತ್ಯಾಗರ್ತಿಯಲ್ಲಿ 7 ಸೆಂ.ಮೀ, ಚಿಕ್ಕಮಗಳೂರಿನ ಯುಗಟಿ 6, ದಕ್ಷಿಣ ಕನ್ನಡದ ಸುಳ್ಯ ಹಾಗೂ ದಾವಣಗೆರೆಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.