ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟಕ್ಕೆ ಮೊದಲ ಬಾರಿಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬೆನ್ನಲ್ಲೇ ಇಂದು ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದೀಗ ನೂತನ ಸಚಿವರ ಪ್ರಮಾಣವಚನ ಆರಂಭವಾಗಿದ್ದು, ಸಚಿವರಾಗಿ ಹೆಚ್.ಕೆ ಪಾಟೀಲ್ ಹಾಗೂ ಕೃಷ್ಣಭೈರೇಗೌಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋದಿಸಿದ್ದಾರೆ. ರಾಜಭವನದಲ್ಲಿ ಇಂದು ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದ್ದು, , ರಾಜಭವನದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಆಗಮಿಸಿ ನೂತನ ಸಚಿವರಿಗೆ ಶುಭಾಶಯ ಕೋರಿದ್ದಾರೆ.
ಇಂದು ಅಥವಾ ನಾಳೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ
ವಿಧಾನಸೌಧದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಇಂದು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಇಂದು ಅಥವಾ ನಾಳೆಯೇ ಖಾತೆ ಹಂಚಿಕೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟಕ್ಕೆ ಮೊದಲ ಬಾರಿಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬೆನ್ನಲ್ಲೇ ಇಂದು ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೌದು, ಇಂದು 24 ಮಂದಿ ನೂತನ ಸಚಿವರು ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ.