ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ, ದೆಹಲಿಯಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.
ದೆಹಲಿಯಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ನಗರದ ವೈಮಾನಿಕ ವೀಕ್ಷಣೆಗಾಗಿ ಡ್ರೋನ್‌ಗಳನ್ನು ಬಳಸುತ್ತಿರುವುದು ಕಂಡುಬಂದಿದೆ.
ಸಂಸತ್ತಿನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು, ಯಾವುದೇ ಬೆಲೆ ತೆತ್ತಾದರೂ ಹೊಸ ಕಟ್ಟಡದ ಬಳಿ ತಮ್ಮ ‘ಮಹಿಳಾ ಮಹಾಪಂಚಾಯತ್’ ಅನ್ನು ಮುಂದುವರಿಸುವುದಾಗಿ ಹೇಳಿದರು. ‘ಮಹಿಳಾ ಮಹಾಪಂಚಾಯತ್’ ನಡೆಸಲು ಅನುಮತಿ ನೀಡದ ಕಾರಣ ಯಾವುದೇ ಪ್ರತಿಭಟನಾಕಾರರಿಗೆ ಹೊಸ ಸಂಸತ್ ಭವನದತ್ತ ತೆರಳಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.