ಬೆಂಗಳೂರು: ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ನೌಕರಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ತಿರುಗೇಟು ನೀಡಿದೆ.
ಈ ಕುರಿತಂತೆ ಟ್ವಿಟ್ ಮಾಡಿದ್ದು, ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು, ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ! ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ ಎಂದು ಟಾಂಗ್ ನೀಡಿದೆ.