ಆದಿಚುಂಚನಗಿರಿ ಮಠದಲ್ಲಿ ಶ್ರೀಗಳ ಆಶೀರ್ವಾದ ಪಡೆದ ಯುಪಿಎಸ್‌ಸಿ ಸಾಧಕರು

ಬೆಂಗಳೂರಿನ ವಿಜಯ ನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಯುಪಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಾಧಕರು ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಯುಪಿಎಸ್‌ಸಿ ಮುಖ್ಯ ಪರೀಕ್ಷೆಯಲ್ಲಿ ರಾಜ್ಯದ 25ಕ್ಕೂ ಹೆಚ್ಚು ಅಭ್ಯರ್ಥಿಗಳು ತೇರ್ಗಡೆಯಾಗಿ ಉತ್ತಮ ರ‍್ಯಾಂಕ್‌ ಪಡೆದಿದ್ದಾರೆ. ಹೀಗಾಗಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ರಾಜ್ಯದ ಅಭ್ಯರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಶ್ರೀ ನಿರ್ಮಲಾನಂದನಾಥ ಶ್ರೀಗಳು

, ನಾಗರಿಕ ಸೇವೆ ಮೂಲಕ ಉನ್ನತ ಸ್ಥಾನಕ್ಕೇರಬೇಕು ಎಂದು ಮಠಕ್ಕೆ ಆಗಮಿಸಿದ್ದ ನಾಲ್ವರು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ಈ ವೇಳೆ ಮುಖಂಡ ನಂಜೇಗೌಡ ನಂಜುಂಡ ಹಾಗೂ ಮಠದ ಸಿಬ್ಬಂದಿ ಉಪಸ್ಥಿತರಿದ್ದರು. ಯುಪಿಎಸ್‌ಸಿ ಪರೀಕ್ಷೆಯಲ್ಲಿ ಹಾಸನ ಜಿಲ್ಲೆ ಅರಸೀಕೆರೆಯ ಬಿ.ಎಸ್‌.ಧನುಷ್‌ ಕುಮಾರ್‌ 501 ರ‍್ಯಾಂಕ್‌, ಬೆಂಗಳೂರಿನ ರಾಜ್‌ ಕುಮಾರ್‌ ಅಕಾಡೆಮಿಯ ಅಭ್ಯರ್ಥಿಗಳಾದ ಆಕಾಶ್‌ ಎ.ಎಲ್‌. 210, ಚೆಲುವರಾಜು. ಆರ್‌ 238, ಡಾ.ವರುಣ್‌ ಕೆ.ಗೌಡ 594 ರ‍್ಯಾಂಕ್‌ ಪಡೆದಿದ್ದಾರೆ.

Loading

Leave a Reply

Your email address will not be published. Required fields are marked *