ಮುಂಗಾರು ಹಂಗಾಮಿನಲ್ಲಿ 3.30 ಲಕ್ಷ ಹೆಕ್ಟೇರ್ ಬಿತ್ತನೆ ಬೀಜ ನಿರೀಕ್ಷೆ

ಹಾವೇರಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

 

ಜಿಲ್ಲೆಯಲ್ಲಿ ಕೃಷಿ ಬೆಳೆಗಳು ಕ್ರಮವಾಗಿ 3,30,447 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುವ ನಿರೀಕ್ಷೆ ಇದೆ. ಈಗಾಗಲೇ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಮಾಡಲಾಗುತ್ತಿದ್ದು, ಹಂತ ಹಂತವಾಗಿ ಬಿತ್ತನೆ ಬೀಜಗಳನ್ನು ಬೇಡಿಕೆಯನುಸಾರ ಪೂರೈಸಲಾಗುವುದು.

ಬಿತ್ತನೆ ಬೀಜಗಳನ್ನು ಜಿಲ್ಲೆಯ 19 ರೈತ ಸಂಪರ್ಕ ಕೇಂದ್ರಗಳು ಹಾಗೂ 22 ಇಲಾಖಾ ಹೆಚ್ಚುವರಿ ಕೇಂದ್ರಗಳು ಹಾಗೂ 12 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ಒಟ್ಟು 52 ಬೀಜ ಮಾರಾಟ ಕೇಂದ್ರಗಳಲ್ಲಿ ವಿತರಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಮುಂಗಾರು ಹಂಗಾಮಿಗೆ ರಸಗೊಬ್ಬರ ಹಂಚಿಕೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದ್ದು, 1,19,346 ಟನ್ ಹಂಚಿಕೆ ಮಾಡಲಾಗಿದೆ. ಆರಂಭಿಕ ದಾಸ್ತಾನು 33703.96 ಟನ್ ಸೇರಿ ಮೇ 15ರವರೆಗೆ 11,581.83 ಸರಬರಾಜು ಮಾಡಲಾಗಿದೆ ಹಾಗೂ ಈವರೆಗೆ 1,583 ಟನ್ ಹಂಚಿಕೆ ಮಾಡಲಾಗಿದೆ.

ಪ್ರಸಕ್ತ 2023ರ ಮುಂಗಾರಿಗೆ ಯೂರಿಯಾ 52,595 ಟನ್, ಡಿಎಪಿ 23,706 ಟನ್, ಎಂ.ಒ.ಪಿ 2,851, ಕಾಂಪ್ಲೆಕ್ಸ್ 38,062 ಟನ್ ಹಾಗೂ ಎಸ್.ಎಸ್.ಪಿ 2150 ಟನ್ ಹಂಚಿಕೆಯಾಗಿದೆ.

ಜಿಲ್ಲೆಯಲ್ಲಿ ರೈತರು ರಸಗೊಬ್ಬರ ಖರೀದಿಸುವಾಗ ಕಡ್ಡಾಯವಾಗಿ ಆಧಾರ್ ಸಂಖ್ಯೆ ನೀಡಬೇಕು. ಮಾರಾಟಗಾರರು ಸಹ ರೈತರ ಆಧಾರ್ ಸಂಖ್ಯೆಯನ್ನು ಬಳಸಿ ರಸಗೊಬ್ಬರ ವಿತರಣೆ ಮಾಡಲು ಸೂಚಿಸಲಾಗಿದೆ. ತಪ್ಪಿದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

Loading

Leave a Reply

Your email address will not be published. Required fields are marked *