ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಡಾ.ಸಿಎನ್ ಅಶ್ವತ್ಥನಾರಾಯಣ ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಕಾಂಗ್ರೆಸ್ ನಿಂದ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಮೈಸೂರಿನಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ, ಈಗ ಶಾಸಕ ಅಶ್ವತ್ಥನಾರಾಯಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕಪೋಲ ಕಲ್ಪಿತ ಆರೋಪ ಮಾಡಿ, ನನ್ನ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಮೈಸೂರಿನಲ್ಲಿ ದೂರು ನೀಡಿದ್ದಾರೆ. ಸಿದ್ಧರಾಮಯ್ಯ ಸೋಲಿಸಬೇಕೆಂಬ ಹಿನ್ನಲೆಯಲ್ಲಿ ಹೇಳಿಕ್ಕೆ ನೀಡಿದ್ದೆ. ಆದರೇ ದುರುದ್ದೇಶದಿಂದ ತಮ್ಮ ವಿರುದ್ಧ ಎಫ್‌ಐಆರ್ ಮಾಡಲಾಗಿದೆ ಎಂಬುದಾಗಿ ಅರ್ಜಿಯಲ್ಲಿ ತಿಳಿಸಿದ್ದಾರೆ.
ನನ್ನ ವಿರುದ್ಧ ದಾಖಲಿಸಿರುವಂತ ಎಫ್‌ಐಆರ್ ದುರುದ್ದೇಶದಿಂದ ಕೂಡಿದೆ. ನಾನು ಜೀವ ಬೆದರಿಕೆ ಹಾಕಿದ್ದೇನೆ ಎಂಬುದಾಗಿ ಕಪೋಲ ಕಲ್ಪಿತ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಬೇಕು ಎಂಬುದಾಗಿ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.