ಮೈಸೂರು ಅಪಘಾತ ಪ್ರಕರಣ: ಮೃತ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ

ಬೆಂಗಳೂರು: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿಯಲ್ಲಿ ಇಂದು ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತಸಂಭವಿಸಿ 10 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದರು. ಇಂತಹ ಮೃತ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಲಾ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು‌. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದಾಗಿ ಕೋರಿದ್ದಾರೆ.

ಇನ್ನೂ ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *