ಶಿವಮೊಗ್ಗ : ಭೀಕರ ರಸ್ತೆ ಅಪಘಾತದಲ್ಲಿ ತಲೆ ಮೇಲೆ ಟಿಪ್ಪರ್ ಹರಿದು 15 ವರ್ಷದ ಬಾಲಕಿ ಮೃತಪಟ್ಟ ಘಟನೆ ಶಿವಮೊಗ್ಗದ ಹೊಳೆ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ ಮಗಳಿಬ್ಬರು ಹೊಳೆಹೊನ್ನೂರಿನಿಂದ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ.
ಪರಿಣಾಮ ಬೈಕ್ ನಲ್ಲಿದ್ದ 15 ವರ್ಷದ ಐಶ್ವರ್ಯ ಕೆಳಗೆ ಬಿದ್ದು ತಲೆಯ ಮೇಲೆ ಟಿಪ್ಪರ್ ಹರಿದಿದೆ. ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟುದ್ದಾರೆ.
ಬಾಲಕಿ ತಂದೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.