ಬೆಂಗಳೂರು: ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಕೇಂದ್ರ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿ, ವಿಶ್ವ ಮಾನ್ಯ ನಾಯಕರಾದಂತಹ ನರೇಂದ್ರಮೋದಿ ನೇತೃತ್ವದ ಸರ್ಕಾರ 9 ವರ್ಷ ಪೂರ್ಣಗೊಳಿಸಿದೆ.
ಒಂಭತ್ತು ವರ್ಷದಲ್ಲಿ ಸಾಕಷ್ಟು ಬದಲಾಗಿದೆ. ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಉನ್ನತೀಕರಣ ಆಗಿರುವುದನ್ನು ನಾವು ನೋಡಿದ್ದೇವೆ ಎಂದರು.