ಬೆಂಗಳೂರು: ಬಹುತೇಕ ದೇಶ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿದಿದೆ. (Gold and Silver Prices) ಅಮೆರಿಕ ಮತ್ತು ದುಬೈನಲ್ಲಿ ಚಿನ್ನದ ಬೆಲೆ 50,000 ರೂ ಮಟ್ಟಕ್ಕಿಂತ ಕಡಿಮೆಗೆ ಇಳಿದಿದೆ. ಸಿಂಗಾಪುರ, ಕುವೇತ್ನಲ್ಲೂ ಬೆಲೆ ನಿರೀಕ್ಷೆಮೀರಿ ಕುಸಿಯುತ್ತಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,290 ರುಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,620 ರುಪಾಯಿಯಲ್ಲಿ ಇದೆ. ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಚಿನ್ನದಬೆಲೆಏರಿಳಿತಕ್ಕೆಏನುಕಾರಣ?
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಭಾರತದಲ್ಲಿರುವಚಿನ್ನಮತ್ತುಬೆಳ್ಳಿಬೆಲೆ (ಮೇ 27ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,710 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 729 ರೂ
ಬೆಂಗಳೂರಿನಲ್ಲಿಚಿನ್ನ, ಬೆಳ್ಳಿಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,920 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ
ವಿವಿಧನಗರಗಳಲ್ಲಿರುವ 22 ಕ್ಯಾರಟ್ಚಿನ್ನದಬೆಲೆ (10 ಗ್ರಾಮ್ಗೆ)
- ಬೆಂಗಳೂರು: 55,700 ರೂ
- ಚೆನ್ನೈ: 56,050 ರೂ
- ಮುಂಬೈ: 55,650 ರೂ
- ದೆಹಲಿ: 55,800 ರೂ
- ಕೋಲ್ಕತಾ: 55,650 ರೂ
- ಕೇರಳ: 55,650 ರೂ
- ಅಹ್ಮದಾಬಾದ್: 55,700 ರೂ
- ಜೈಪುರ್: 55,800 ರೂ
- ಲಕ್ನೋ: 55,800 ರೂ
- ಭುವನೇಶ್ವರ್: 55,650 ರೂ