ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲಿದ್ದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯt ಮತ್ತೊಮ್ಮೆ ವಿಸ್ತರಣೆ ಮಾಡಿ ಬೆಂಗಳೂರಿನ ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಮೂಲಕ ಡಿ.ಕೆ.
ಶಿವಕುಮಾರ್ ಅವರು ಸದ್ಯಕ್ಕೆ ನಿರಾಳರಾಗಿದ್ದಾರೆ. ಈ ಹಿಂದೆ ನ್ಯಾ. ನಟರಾಜನ್ ಪೀಠದಲ್ಲಿ ವಿಚಾರಣೆ ನಡೆದಿತ್ತು. ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ವಿಚಾರಣೆ ನಡೆಸಿದೆ.
ಹೀಗಾಗಿ ಯಾವ ಪೀಠದಲ್ಲಿ ವಿಚಾರಣೆ ಮುಂದುವರಿಸಬೇಕು ಎಂದು ಸಿಜೆ ನಿರ್ಧಾರ ಮಾಡಬೇಕೆಂದು ಪ್ರಕರಣವನ್ನು ಅವರಿಗೆ ವರ್ಗಾಯಿಸಲಾಗಿದೆ. ಈ ಕಾರಣದಿಂದ ಮುಂದಿನ ವಿಚಾರಣೆವರೆಗೂ ಮಧ್ಯಂತರ ತಡೆಯಾಜ್ಞೆ ಮುಂದುವರಿಸಿ ಆದೇಶವನ್ನು ವಿಸ್ತರಣೆ ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಎರಡನೇ ಬಾರಿಗೆ ಹೈಕೋರ್ಟ್ ಮೇ ಅಂತ್ಯದವರೆಗೂ ತಡೆಯಾಜ್ಞೆ ನೀಡಿತ್ತು. ಇದೀಗ ಮತ್ತೆ ತಡೆಯಾಜ್ಞೆ ವಿಸ್ತರಣೆ ಮಾಡಲಾಗಿದೆ.