ಬೆಂಗಳೂರು: ಗ್ಯಾರಂಟಿ ಯೋಜನೆ ಕುರಿತ ಸಂಪುಟ ತೀರ್ಮಾನಗಳ ಬಗ್ಗೆ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಆ ವಿಶ್ವಾಸವನ್ನು ನಾವು ಹುಸಿ ಮಾಡುವುದಿಲ್ಲ. ನಾವು ಬಸವಣ್ಣನ ನಾಡಿನವರು. ಕೊಟ್ಟ ಮಾತಿಗೆ ಬದ್ಧ.
ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಮಹಿಳೆಯರಿಗೆ ಪ್ರಯಾಣ ಉಚಿತ, 200 ವಿದ್ಯುತ್ ವಿದ್ಯುತ್ ಖಚಿತ, ಅಕ್ಕಿ 10 ಕೆಜಿ ನಿಶ್ಚಿತ, ಮನೆ ಯಜಮಾನಿಗೆ 2000 ರೂಪಾಯಿ ಸಹಾಯಧನ ಖಂಡಿತ. ಅಂತೆಯೂ ಯುವ ನಿಧಿ ಬೆಂಬಲವು ನಿರುದ್ಯೋಗಿ ಯುವಕರಿಗೆ ನೀಡಲಾಗಿದೆ ಎಂದರು.
ನಾವು ಬಸವಣ್ಣನ ನಾಡಿನವರು ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ. ಅಂತೆಯೇ 5 ಗ್ಯಾರಂಟಿಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.